ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್19 ಸೋಂಕಿಗೆ ಇನ್ನೊಬ್ಬರು ಬಲಿಯಾಗಿದ್ದು, ಈ ಮೂಲಕ ಶಿವಮೊಗ್ಗದಲ್ಲಿ ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.
ಸೋಂಕಿಗೆ ಒಳಗಾಗಿದ್ದ 90 ವರ್ಷದ ವೃದ್ಧೆಯೊಬ್ಬರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಆದರೆ, ಈ ಕುರಿತಂತೆ ಜಿಲ್ಲಾಡಳಿತವಾಗಲೀ ಅಥವಾ ಆರೋಗ್ಯ ಇಲಾಖೆ ಅಧಿಕಾರಿಗಳಾಗಲೀ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ. ಈವರೆಗೂ ಜಿಲ್ಲೆಯಲ್ಲಿ ಸೋಂಕಿಗೆ ಸಾವನ್ನಪ್ಪಿರುವವರ ಸಂಖ್ಯೆ ನಾಲ್ಕು ಅಷ್ಟೇ ಎಂದು ಹೆಲ್ತ್ ಬುಲೆಟಿನ್ ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈವರೆಗೂ ಸೋಂಕಿಗೆ ಸಾವನ್ನಪ್ಪಿರುವವರ ಎಷ್ಟು ಮಂದಿ ಎಂಬುದು ಸ್ಪಷ್ಟಗೊಳ್ಳಬೇಕಿದೆ.
Get In Touch With Us info@kalpa.news Whatsapp: 9481252093
Discussion about this post