ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದ ಮಹಿಳೆಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6ನೆಯ ವಾರ್ಡನ್ನು ಸೀಲ್ ಡೌನ್ ಮಾಡಲಾಗಿದೆ.
ಜೂನ್ 17ರಂದು ಮುಂಬೈನಿಂದ ತಮ್ಮ ಮಗುವಿನೊಂದಿಗೆ ಆಗಮಿಸಿದ್ದ ಮಹಿಳೆಯೊಬ್ಬರನ್ನು 18ರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರ ಪರೀಕ್ಷಾ ವರದಿ ನಿನ್ನೆ ರಾತ್ರಿ ಬಂದಿದ್ದು, ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ಮಗುವಿಗೆ ಕೊರೋನಾ ನೆಗೆಟಿವ್ ಬಂದಿದೆ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, ಎಂಪಿಎಂ ಆರನೆಯ ವಾರ್ಡ್ನ ಮಹಿಳೆಯೊಬ್ಬರಲ್ಲಿ ಕೊರೋನಾ ಪಾಸಿಟವ್ ದೃಢಪಟ್ಟ ಹಿನ್ನೆಲೆಯಲ್ಲಿ 2, 3, 4 ನೆಯ ಕ್ರಾಸ್’ಗಳನ್ನು ಇಂದು ಮುಂಜಾನೆ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಝೋನ್ ಆಗಿ ಮಾಡಲಾಗಿದೆ ಎಂದರು.
ಇನ್ನು, ಈ ಮೂರು ರಸ್ತೆಗಳಲ್ಲಿ ಜನ ಹಾಗೂ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಯಾರೂ ಮನೆಯಿಂದ ಹೊರಕ್ಕೆ ಬರುವಂತಿಲ್ಲ. ಪ್ರತಿನಿತ್ಯ ನಗರಸಭೆ ವತಿಯಿಂದಲೇ ನಿಗದಿತ ಸಮಯಕ್ಕೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲಾಗುವುದು. ಅಗತ್ಯವಿರುವವರು ಖರೀದಿ ಮಾಡಬಹುದು ಎಂದು ತಿಳಿಸಿದರು.
Get In Touch With Us info@kalpa.news Whatsapp: 9481252093
Discussion about this post