ಕಲ್ಪ ಮೀಡಿಯಾ ಹೌಸ್ | ಬೆಂಗಳೂರು(ನೆಲಮಂಗಲ) |
ಕಾರು ಹಾಗೂ ಬಸ್ ನಡುವೆ ಭೀಕರ ರಸ್ತೆ ಅಪಘಾತ #RoadAccident ಸಂಭವಿಸಿದ್ದು, ಐವರು ಯುಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿಯಲ್ಲಿ ನಡೆದಿದೆ.
ಹೊಸಕೋಟೆ #Hoskote ಬಳಿಯಲ್ಲಿ ಎರಡು ದಿನಗಳ ಹಿಂದೆ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ ನೆಲಮಂಗಲ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿವಾಗಿದೆ.
ಬೆಂಗಳೂರು #Bengaluru ಹೊರವಲಯ ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಕೆಎಸ್’ಆರ್’ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಐವರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಎಂದು ಗುರುತಿಸಲಾಗಿದ್ದು, ಇನ್ನೂ ಮೂವರ ಗುರುತು ಸಿಗಬೇಕಿದೆ. ಮೃತರು ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದರು.
ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬೆಂಗಳೂರು ಕಡೆಯಿಂದ ಹೊರಟಿದ್ದ ಕೆಎಸ್’ಆರ್’ಟಿಸಿ ಬಸ್’ಗೆ ಸಿನಿಮಿಯಾ ರೀತಿಯಲ್ಲಿ ಡಿಕ್ಕಿಯಾಗಿದೆ.
ಬಸ್’ನಲ್ಲಿ 45 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ರೀತಿಯಲ್ಲೂ ಸಹ ಅಪಾಯವಾಗಿಲ್ಲ.
ದೊಡ್ಡಬಳ್ಳಾಪುರದ ಐವರು ಸ್ನೇಹಿತರು ಸೇರಿ ಇಂಡಿಕಾ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದರು. ತುಮಕೂರಿನಿಂದ ಬೆಂಗಳೂರಿನತ್ತ ಪ್ರಯಾಣ ಮಾಡುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.
ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಜಿಂದಾಲ್ ಬಳಿಯ ಫ್ಲೈ ಓವರ್ ಮೇಲೆ ಕಳೆದ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಮನೆಯವರಿಗೆ ಹೇಳದೆ ಸ್ನೇಹಿತರ ಗ್ಯಾಂಗ್ ಜಾಲಿ ರೈಡ್ ಹೋಗಿದ್ದು, ವಾಪಾಸ್ ಆಗುವ ವೇಳೆ ದುರ್ಘಟನೆ ಸಂಭವಿಸಿದೆ. ಅತಿವೇಗವಾಗಿ ಕಾರು ಚಲಾಯಿಸಿದ್ದೆ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ ಮುಂಭಾಗ ಜಖಂಗೊಂಡಿದೆ.
ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















