No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

kalpa News by kalpa News
April 30, 2020
in Small Bytes, ದಾವಣಗೆರೆ
0
ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ದಾವಣಗೆರೆ: ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳಲ್ಲಿ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ನಗರದ ಘೋಷಿತ ಸ್ಲಂಗಳಲ್ಲಿ ಒಂದಾದ ಭಾಷಾನಗರದ 35 ವರ್ಷದ ಮಹಿಳೆಯೋರ್ವರಲ್ಲಿ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು ಇವರು ರೋಗಿ ಸಂಖ್ಯೆ 533 ಆಗಿದ್ದಾರೆ. ಈ ಮಹಿಳೆ ಈ ಭಾಗದ ನಗರ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ.

ಈ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನರನ್ನು ಹೋಟೆಲ್ ಒಂದರಲ್ಲಿ ಐಸೋಲೇಷನ್‍ನಲ್ಲಿ ಇಡಲಾಗಿದೆ. ಇವರ ಸಂಪರ್ಕದಲ್ಲಿದ್ದ 35 ಜನರ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಇವರು ಕೆಲಸ ಮಾಡುತ್ತಿದ್ದ ನಗರ ಆರೋಗ್ಯ ಕೇಂದ್ರವನ್ನು ಬಂದ್ ಮಾಡಲಾಗಿದೆ.

ಕಂಟೈನ್‍ಮೆಂಟ್ ಮತ್ತು ಬಫರ್ ಝೋನ್ ಗುರುತಿಸುವಿಕೆ 
ಈ ಮಹಿಳೆ ವಾಸಿಸುತ್ತಿದ್ದ ಮನೆಯನ್ನು ಎಪಿಸೆಂಟರ್ ಎಂದು ಗುರುತಿಸಿ ಈ ಎಪಿಸೆಂಟರ್‍ನ 100 ಮೀಟರ್ ವ್ಯಾಪ್ತಿ ಪ್ರದೇಶವನ್ನು ಕಂಟೈನ್‍ಮೆಂಟ್ ಝೋನ್ ಎಂದು ಗುರುತಿಸಿ, ಈ ಪ್ರದೇಶವನ್ನು ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಸಂಪೂರ್ಣ ಸೀಲ್‍ಡೌನ್ ಮಾಡಲಾಗುವುದು. ಜೊತೆಗೆ ಇಲ್ಲಿ ನಾಳೆಯಿಂದಲೇ ಸಕ್ರಿಯ ಸರ್ವೆಲೆನ್ಸ್ ನಡೆಸಲಾಗುವುದು. ಹಾಗೂ ಎಪಿಸೆಂಟರ್‍ನಿಂದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಝೋನ್ ಎಂದು ಗುರುತಿಸಿದ್ದು, ಇಲ್ಲಿಯೂ ಸಹ ಸರ್ವೆಲೆನ್ಸ್ ನಡೆಯಲಿದೆ. ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್‍ಗಳಲ್ಲಿ 740 ರೂಂಗಳನ್ನು ಕಾಯ್ದಿರಿಸಲಾಗಿದೆ.

ಈ ಮಹಿಳೆಯ ಸೆಕೆಂಡರಿ ಕಾಂಟಾಕ್ಟ್‍ಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು. ಈ ಮಹಿಳೆ ಏ.23 ರಂದು ಮಹಿಳೆಯೋರ್ವರಿಗೆ ಹೆರಿಗೆ ಮಾಡಿಸಿದ್ದು, ನಂತರ ತಮಗೆ ಸುಸ್ತು ಮತ್ತು ಸ್ವಲ್ಪ ಜ್ವರ ಕಾಣಿಸಿಕೊಂಡಿದೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಾಗ ತಿಳಿಸಿದ್ದಾರೆ. ಆದ ಕಾರಣ ಆ ಮಹಿಳೆಯನ್ನೂ ಪತ್ತೆ ಹಚ್ಚಿ ಅವರನ್ನೂ ಪರೀಕ್ಷೆಗೆ ಒಳಪಡಿಸಿ ಕ್ರಮ ಕೈಗೊಳ್ಳಲಾಗುವುದು. ಸೋಂಕಿತ ಮಹಿಳೆಯ ಅಕ್ಕನ ಮನೆ ನಿಟುವಳ್ಳಿಯಲ್ಲಿ ಇದ್ದು ಸೋಂಕಿತಳ ಮಗ ಅಲ್ಲಿಗೆ ಹೋಗಿ ಬಂದಿದ್ದಾನೆ ಎನ್ನಲಾಗಿದ್ದು ಅಲ್ಲಿರುವ ಅವರ ಸಂಬಂಧಿಕರನ್ನೂ ಪರೀಕ್ಷಿಸಿ ಕ್ರಮ ವಹಿಸಲಾಗುವುದು ಎಂದರು.

ಇನ್ಸಿಡೆಂಟ್ ಕಮಾಂಡರ್ ನೇಮಕ
ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‍ರನ್ನು ಈ ಕಂಟೈನ್‍ಮೆಂಟ್ ಝೋನ್ ನಿರ್ವಹಣೆಗಾಗಿ ಇನ್ಸಿಡೆಂಟ್ ಕಮಾಂಡರ್ ಎಂದು ನೇಮಕ ಮಾಡಲಾಗಿದ್ದು ನಿಯಮಾನುಸಾರ ಇವರು ಇಲ್ಲಿ ಕ್ರಮ ಕೈಗೊಳ್ಳುವರು. ಕಂಟೈನ್‍ಮೆಂಟ್ ಝೋನ್‍ನಲ್ಲಿನ ಪ್ರತಿ ಮನೆ ಸರ್ವೇ ಮಾಡಲಾಗುವುದು. ಹಾಗೂ ಏರಿಯಾ ಡಿಸ್‍ಇನ್‍ಫೆಕ್ಷನ್ ಕೆಲಸ ಮಾಡಲಾಗುವುದು. ಹಾಗೆಯೇ ಈ ಪ್ರದೇಶಗಳಿಗೆ ಅಗತ್ಯ ವಸ್ತುಗಳು, ವೈದ್ಯಕೀಯ ಸೇವೆ ಹೊರತುಪಡಿಸಿ ಯಾವುದೇ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಪಾಲಿಕೆ ವ್ಯಾಪ್ತಿಯ 45 ವಾರ್ಡುಗಳು ಸೇರಿದಂತೆ ಕಲ್ಪನಹಳ್ಳಿ, ಪುಟಗನಾಳ್, ಬೇತೂರು, ಬೂದಾಳ್, ದೇವಿಕೆರೆ ಹೀಗೆ ನಗರ ವ್ಯಾಪ್ತಿಗೊಳಪಡುವ ಕೆಲವು ಗ್ರಾಮಗಳಿಗೂ ನಿನ್ನೆ ಘೋಷಿಸಿದ್ದ ಸಡಿಲಿಕೆಯನ್ನು ನಿರ್ಬಂಧಿಸಿ ಅಗತ್ಯ ವಸ್ತುಗಳ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರಸ್ತುತ ಕ್ವಾರೆಂಟೈನ್ ಮಾಡಲು ನಗರದಲ್ಲಿ ಹೋಟೆಲ್‍ಗಳಲ್ಲಿ 740 ರೂಂಗಳನ್ನು ಮೀಸಲಿಡಲಾಗಿದೆ.

ಮನವಿ
ಈ ಸೋಂಕಿತ ಮಹಿಳೆಯಿಂದ ಕಳೆದ 15 ದಿನಗಳಿಂದ ಚಿಕಿತ್ಸೆ, ಶುಶ್ರೂಷೆ ಪಡೆದವರು ಅಥವಾ ಸಂಪರ್ಕಕ್ಕೆ ಬಂದವರು ಜಿಲ್ಲಾಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗುವಂತೆ ಈ ಮೂಲಕ ಮನವಿ ಮಾಡುತ್ತೇನೆ.

ಕೃಷಿ ಚಟುವಟಿಕೆಗಾಗಿ ವಿವಿಧ ತಾಲ್ಲೂಕು ಮತ್ತು ಹಳ್ಳಿಗಳಿಂದ ದಾವಣಗೆರೆಗೆ ರೈತರು ಬರುವುದನ್ನು ನಿಲ್ಲಿಸಿದರೆ ಒಳಿತು. ಇಲ್ಲಿ ಸೋಂಕಿರುವುದರಿಂದ ಆದಷ್ಟು ತಾಲ್ಲೂಕು ಕೇಂದ್ರಗಳಲ್ಲೇ ಗೊಬ್ಬರ, ಬೀಜ, ಪರಿಕರ ಕೊಳ್ಳಬೇಕು. ಕೃಷಿಕರಿಗೆ ಸಹಕಾರಿಯಾಗುವಂತೆ ದಾವಣಗೆರೆಯಲ್ಲಿ ಅಗ್ರಿ ವಾರ್ ರೂಂ ಮಾಡುವ ಚಿಂತನೆ ಮಾಡಲಾಗುತ್ತಿದ್ದು, ಇದರ ಮೂಲಕ ಕೃಷಿಕರ ಮನೆ ಬಾಗಿಲಿಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದ ವಸ್ತುಗಳನ್ನು ತಲುಪಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆಗಳನ್ನು ಕಂಟೈನ್‍ಮೆಂಟ್ ಮತ್ತು ಬಫರ್ ಝೋನ್‍ಗಳಲ್ಲಿ ನಿರ್ಬಂಧಿಸಲಾಗುವುದು. ನಗರದಲ್ಲಿರುವ 10 ಚೆಕ್‍ಪೋಸ್ಟ್‌ಗಳು 24×7 ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಲಿವೆ. ಯಾರೂ ಕೂಡ ಅನಾವಶ್ಯಕವಾಗಿ ಓಡಾಡಬಾರದು. ಒಂದು ಪಕ್ಷ ಓಡಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಪಂ ಸಿಇಓ ಪದ್ಮಾ ಬಸವಂತಪ್ಪ ಇದ್ದರು.

Get in Touch With Us info@kalpa.news Whatsapp: 9481252093

Tags: BayaluSeemeNewsContainment ZoneCoronavirusCovid19IndiaDavanagereKannadaNewsWebsiteಕಂಟೈನ್‍ಮೆಂಟ್ ಝೋನ್ದಾವಣಗೆರೆ
Share205Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ದಾವಣಗೆರೆಯಲ್ಲಿ ಮತ್ತೊಂದು ಕೊರೋನಾ ಸೋಂಕು ಪ್ರಕರಣ ದೃಢ: ಜಿಲ್ಲೆಯಲ್ಲಿ ಆತಂಕ

Next Post

ಆರ್ಯವೈಶ್ಯ ಸಮಾಜ ‘ವಾಸವಿ ಜಯಂತಿ’ಯನ್ನು ಮಾದರಿಯಾಗಿ ಆಚರಿಸುತ್ತಿರುವುದು ಹೇಗೆ ಗೊತ್ತಾ?

kalpa News

kalpa News

Next Post

ಆರ್ಯವೈಶ್ಯ ಸಮಾಜ ‘ವಾಸವಿ ಜಯಂತಿ’ಯನ್ನು ಮಾದರಿಯಾಗಿ ಆಚರಿಸುತ್ತಿರುವುದು ಹೇಗೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL