ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯೊಂದರಲ್ಲಿ 2000 ರೂ. ಮುಖಬೆಲೆಯ ನೋಟನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರ, ಮತ್ತೊಮ್ಮೆ ದೇಶದ ಜನರಿಗೆ ಶಾಕ್ ನೀಡಿದೆ.
ಈ ಕುರಿತಂತೆ ಎಲ್ಲ ಬ್ಯಾಂಕ್ ಗಳಿಗೆ ಸೂಚನೆ ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್, 2000 ರೂ. ಮುಖಬೆಲೆಯ ನೋಟಿನ ವಿತರಣೆಯನ್ನು ತತಕ್ಷಣದಿಂದಲೇ ನಿಲ್ಲಿಸುವಂತೆ ಸೂಚನೆ ನೀಡಿದೆ.
ಬದಲಾವಣೆ ಹೇಗೆ?
ಮೇ 23 ರಿಂದ ಸೆಪ್ಟೆಂಬರ್ 30ರ ವರೆಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಈ ಕುರಿತಂತೆ ಆರ್’ಬಿಐ ಮಾಹಿತಿ ಪ್ರಕಟಿಸಿದ್ದು, 2000 ರೂಪಾಯಿ ನೋಟ್ ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 20 ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ಅಲ್ಲದೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಗ್ರಾಹಕರಿಗೆ ವಿತರಿಸದಂತೆ ದೇಶದ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post