ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಬಸ್ ಬೆಂಕಿ ಅವಘಡ ಮುಂದುವರೆದಿದ್ದು, ಇಂದು ಮುಂಜಾನೆ ಖಾಸಗಿ ಸ್ಲೀಪರ್ ಬಸ್’ವೊಂದು ನೆಲಮಂಗಲ #Nelamangala ಬಳಿಯ ಹನುಮಂತಪುರ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
#Tumkur ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್’ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ.
#Bengaluru ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಈ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇನ್ನೂ ಬಸ್ ಲಗೇಜ್ ಬಾಕಸ್’ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮ ಆಗಿವೆ. ಬೆಂಕಿ ದೊಡ್ಡ ಗಾತ್ರದಲ್ಲಿ ವ್ಯಾಪಿಸಿದ ಹಿನ್ನೆಲೆ ಬೆಲೆ ಬಾಳುವ ವಸ್ತುಗಳೆಲ್ಲ ಹೊತ್ತಿ ಉರಿದಿದ್ದು, ಪ್ರಯಾಣಿಕರು ಕಣ್ಣೀರು ಹಾಕಿದ್ದಾರೆ.
ಹಿಂದೆ ಬೆಂಕಿ ಅನಾಹುತ
ಈ ಹಿಂದೆಯೂ ಸಹ ರಾಜ್ಯದಲ್ಲಿ ಹಲವು ಬಸ್ ಬೆಂಕಿ ಪ್ರಕರಣಗಳು ನಡೆದಿದ್ದು, ಅದರ ಸರಣಿ ಇಂದು ಮತ್ತೆ ಮುಂದುವರೆದಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್ ಅನಂತಪುರದ ಬಳಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿತ್ತು. ಅದೃಷ್ಟವಶಾತ್ ಬಸ್’ನಲ್ಲಿದ್ದ 36 ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದರು.
ಈ ಘಟನೆಗೂ ಮುನ್ನ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್ ಬೆಂಕಿಗೆ ಆಹುತಿಯಾಗಿತ್ತು. ಈ ವೇಳೆ 29 ಜನ ಪ್ರಯಾಣಿಸುತ್ತಿದ್ದರು. ಆದರೆ ಈ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















