ಕಲ್ಪ ಮೀಡಿಯಾ ಹೌಸ್ | ಸೊರಬ |
ಜಾನುವಾರು ಮೇಯಿಸಲು ತೆರಳಿದ ಬಾಲಕನೋರ್ವ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಸಾತ್ವಿಕ್(14) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್ ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದಾಗ ಗ್ರಾಮದ ಫಾತೀಮ ಎಂಬುವರ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.
ಮಗನ ಸಾವಿಗೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಮೇಲೆತ್ತಿದ್ದಾರೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















