ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೋವಿಡ್19 ವೈರಾಣು ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ಲಾಕ್ ಡೌನ್ ಅನ್ನು ರಾಜ್ಯ ಸರ್ಕಾರ ಇನ್ನೂ ಎರಡು ದಿನ ಅಂದರೆ ಮೇ 19ರವರೆಗೂ ವಿಸ್ತರಣೆ ಮಾಡಿದೆ.
ಈ ಕುರಿತಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದು, ಕೋವಿಡ್19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯಿಂದಾಗಿ ಕೆಎಸ್’ಆರ್’ಟಿ, ಬಿಎಂಟಿಸಿ ಬಸ್’ಗಳು ಪುನರ್ ಆರಂಭವಾಗುತ್ತಿಲ್ಲ. ಆಟೋ, ಟ್ಯಾಕ್ಸಿ ರಸ್ತೆಗೆ ಇಳಿಯುತ್ತಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್, ಹೋಟೆಲ್, ಪಬ್ ಬಾಗಿಲು ತೆರೆಯುತ್ತಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆದು ಸಹಜ ಪರಿಸ್ಥಿತಿ ಮರುಕಳಿಸಲು ಇನ್ನೊಂದಿಷ್ಟು ದಿನಗಳ ಕಾಲ ಕಾಯಬೇಕಾಗಿದೆ.
ಇನ್ನು ಇದೇ ವೇಳೆ ಪಂಜಾಬ್, ಮಹಾರಾಷ್ಟ್ರ ಹಾಗೂ ತಮಿಳುನಾಡು ಸರ್ಕಾರ ಈ ಮಾಸಾಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸಿವೆ.
Get in Touch With Us info@kalpa.news Whatsapp: 9481252093
Discussion about this post