ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್: ತೆಲಂಗಾಣದ ವಶುವೈದ್ಯೆಯೋರ್ವರನ್ನು ಭೀಕರವಾಗಿ ಸಾಮೂಹಿಕ ಅತ್ಯಾಚಾರ ಮಾಡಿ, ಸುಟ್ಟು ಹಾಕಿದ ಘಟನೆ ನಡೆದ ಪ್ರದೇಶದಲ್ಲೇ ಇನ್ನೊಂದು ಮಹಿಳೆ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಶಂಶಾಬಾದ್ ಬಳಿಯ ಪ್ರದೇಶವೊಂದರಲ್ಲಿ ಸುಮಾರು 35 ವರ್ಷ ಅಂದಾಜಿನ ಮಹಿಳೆ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಇನ್ನು, 22 ವರ್ಷದ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಭೀಕರ ಹತ್ಯೆಗೂ ಇಂದು ವರದಿಯಾಗಿರುವ ಘಟನೆಗೂ ಸಂಬಂಧವಿದೆಯೇ ಎಂಬ ಕುರಿತಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇನ್ನು, ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Get in Touch With Us info@kalpa.news Whatsapp: 9481252093

















