ಪೂನಾ: ಹಿಂದುತ್ವ ವಿರೋಧಿ ಹಾಗೂ ಎಡಪಂಥೀಯ ಸಾಹಿತಿಗಳಲ್ಲಿ ಹಲವರು ಟಾರ್ಗೆಟ್ ಆಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಅವರುಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ಈ ವಿಚಾರ ದಾಖಲಾಗಿದೆ ಎಂದು ಹೇಳಲಾಗಿದ್ದು, ಈ ವಿಚಾರವನ್ನು ಬಂಧಿತ ಆರೋಪಿ ಎಸ್‌ಐಟಿ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಸುರ್ಜೀತ್ ಕುಮಾರ್ ಅಲಿಯಾಸ್ ಪ್ರವೀಣ್ ಎಂಬಾತನಿಂದ ವಶ ಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿರುವ ಡೈರಿಯಲ್ಲಿ ಕನ್ನಡ ಸಾಹಿತಿ ಕೆ.ಎಸ್. ಭಗವಾನ್, ನಟ ಗಿರೀಶ್ ಕಾರ್ನಾಡ್, ಮಾಜಿ ಸಚಿವೆ ಬಿ.ಟಿ. ಲಲಿತಾನಾಯ್‌ಕ್, ವಿಚಾರವಾದಿ ಸಿ.ಎಸ್. ದ್ವಾರಕಾನಾಥ್, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿಗಳು ಟಾರ್ಗೆಟ್ ಆಗಿದ್ದಾರೆ ಎನ್ನಲಾಗಿದೆ.
ಹಿಂದುತ್ವ ವಿರೋಧಿ ಸಾಹಿತ್ಯದ ಕಾರಣದಿಂದಾಗಿ ಈ ಎಲ್ಲಾ ಸಾಹಿತಿಗಳನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಹೇಳಲಾಗಿದ್ದು, ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ಮರಾಠಿ ಭಾಷೆಯಲ್ಲಿ ಕೋಡ್ ವರ್ಡ್‌ಗಳನ್ನು ಬರೆಯಲಾಗಿದೆ ಎನ್ನಲಾಗಿದೆ.

















