ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂತ್ರಾಲಯ: ದೇಶವ್ಯಾಪಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಯರ ಭಕ್ತರು ಯಾವುದೇ ಕಾರಣಕ್ಕೂ ಮಂತ್ರಾಲಯಕ್ಕೆ ಬರುವುದು ಬೇಡ ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಕೊರೋನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಂತ್ರಾಲಯ ಮಠಕ್ಕೆ ಎಲ್ಲ ಭಕ್ತರಿಗೂ ಸಹ ಪ್ರವೇಶವನ್ನು ನಿಷೇಧಿಸಿದ್ದೇವೆ. ಭಕ್ತರು ತಮ್ಮ ಮನೆಗಳಿಂದಲೇ ರಾಯರ ಪ್ರಾರ್ಥನೆ ಹಾಗೂ ಪೂಜೆ ಮಾಡುವ ಮೂಲಕ ಗುರುಗಳ ಅನುಗ್ರಹಕ್ಕೆ ಪಾತ್ರರಾಗಿ ಎಂದಿದ್ದಾರೆ.
ಶ್ರೀಮಠದಲ್ಲಿ ಎಂದಿನಂತೆ ಪೂಜಾಕೈಂಕರ್ಯಗಳು ನಡೆಯಲಿವೆ. ಆದರೆ, ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದ್ದು, ವೈರಸ್ ಸೋಂಕು ಕಡಿಮೆಯಾಗುವವರೆಗೂ ಇದು ಜಾರಿಯಲ್ಲಿರಲಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post