ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ದೆಹಲಿ ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ನಡೆಸುತ್ತಿರುವ ಧರಣಿ ವಿರುದ್ಧ ದಾಖಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಕೇಜ್ರಿವಾಲ್ ಹಾಗೂ ಅವರ ಸಂಪುಟದ ಮುಖಂಡರು ನಡೆಸುತ್ತಿರುವ ಧರಣಿ ಅಸಾಂವಿಧಾನಿಕವಾದದ್ದು ಎಂದಿದೆ. ಅಲ್ಲದೆ, ಈ ಕುರಿತ ಅರ್ಜಿಯನ್ನು ಬೇಸಿಗೆ ರಜೆ ಬಳಿಕ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.
ಐಎಎಸ್ ಅಧಿಕಾರಿಗಳು ಕರ್ತವ್ಯಕ್ಕೆ ಮರಳಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಅವರ ಮಂತ್ರಿಮಂಡಲದ ಸದ್ಯರು ನಡೆಸುತ್ತಿರುವ ಮುಷ್ಕರ 9ನೆಯ ದಿನಕ್ಕೆ ಕಾಲಿಟ್ಟಿದೆ.
Discussion about this post