ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಿಪ್ಪನ್ ಪೇಟೆ: ಮಲೆನಾಡಿನ ಪ್ರತಿಭಾನ್ವಿತ ಶಿಕ್ಷಕಿಯೊಬ್ಬರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ರಿಪ್ಪನ್’ಪೇಟೆಗೆ ಗೌರವ ತಂದಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ಕಲ್ಯಾಣ ನಿಧಿಯಿಂದ ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕಲಿಕೋಪಕರಣ ತಯಾರಿಕಾ ಸ್ಪರ್ಧೆಯಲ್ಲಿ ಹುಂಚ ಸಮೀಪದ ಸಮಟಗಾರುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಅಂಬಿಕಾ ಚಂದ್ರಶೇಖರ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನು ಶಾಲಾಭಿವೃದ್ದಿ ಸಮಿತಿ ಮತ್ತು ವಿದ್ಯಾರ್ಥಿ ವೃಂದ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.
Get in Touch With Us info@kalpa.news Whatsapp: 9481252093















