ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಮಾದಿಗ ದಂಡೋರ ಹಾಗೂ ಪ್ರಗತಿಪರ ದಲಿತ ಸಂಘಟನೆಗಳು ಆಗ್ರಹಿಸಿವೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಿಲ್ಲಿಂದು ಮಾತನಾಡಿದ ಪ್ರಮುಖರು, ರಾಜ್ಯ ಹಾಗೂ ಜಿಲ್ಲೆಯ ಪಕ್ಷ ಸಂಘಟನೆಗೆ ಕೆ.ಎಸ್. ಈಶ್ವರಪ್ಪ ಅವರು ಅತ್ಯಂತ ಮಹತ್ವದ ಕೊಡುಗೆ ನೀಡಿದ್ದಾರೆ. ಅದರಲ್ಲೂ ಹಿಂದುಳಿದ ವರ್ಗದ ಪ್ರಭಾವಿ ನಾಯಕರಾಗಿರುವ ಅವರು ನಮ್ಮ ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅನನ್ಯ. ಅವರ ಚಿಂತನೆ, ದೂರದೃಷ್ಠಿಯನ್ನು ನಂಬಿ ನಮ್ಮ ಸಮುದಾಯ ಅವರ ಬೆಂಬಲಕ್ಕೆ ನಿಂತಿದೆ ಎಂದರು.
ಜಿಲ್ಲೆ ರಾಜ್ಯ ರಾಜ್ಯಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿರುವ ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಚ್. ಶಿವಾಜಿ, ಎಚ್.ಎನ್. ಮಂಜುನಾಥ್, ರಾಜ್ ಕುಮಾರ್, ರಂಗಪ್ಪ, ಸಿ. ಮೂರ್ತಿ, ಎಸ್. ನಾಗರಾಜ್ ಪ್ರಭು, ಯೋಗೇಶ್, ಜಗದೀಶ್, ಮಂಜು ಸೇರಿದಂತೆ ಹಲವರಿದ್ದರು.










Discussion about this post