ಶ್ರೀನಾಗಬ್ರಹ್ಮ ಕ್ರಿಯೆಷನ್ಸ್ ಲಾಂಛನದಲ್ಲಿ ಡಾ.ಬಿಎಸ್.ಶೈಲೇಶ್ ಕುಮಾರ್ ಅವರು ನಿರ್ಮಿಸಿರುವ ‘6ನೆಯ ಮೈಲಿ‘ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ.
ಚಿತ್ರ ಜೂನ್ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಾಯಿಕಿರಣ್ ಸಂಗೀತ ನಿರ್ದೆಶನದ ಈ ಚಿತ್ರದ ಹಾಡುಗಳ ಸೀಡಿ ಈಗಾಗಲ್ಲೇ ಪಿ ಆರ್ ಕೆ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸೀನಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಪರಮೇಶ್ ಪಿ.ಎಂ(ಪರ್ಮಿ) ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ, ಡಿರೆಂಟ್ ಡ್ಯಾನಿ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸಂಚಾರಿ ವಿಜಯ್, ಆರ್.ಜೆ.ನೇತ್ರ, ರಘು ಪಾಂಡೇಶ್ವರ್, ಕೃಷ್ಣ ಹೆಬ್ಬಾಳೆ, ಡಾ. ಜಾಹ್ನವಿ, ಆರ್.ಜೆ.ಸುದ್ದೇಶ್, ಹೇಮಂತ್ ಸುಶೀಲ್, ಮೈತ್ರಿ ಜಗ್ಗಿ ಮುಂತಾದವರಿದ್ದಾರೆ.
Discussion about this post