ಕಲ್ಪ ಮೀಡಿಯಾ ಹೌಸ್ | ಅರಸೀಕೆರೆ |
ಲೋಕಸಭಾ ಚುನಾವಣಾ #Lok Sabha Election ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರಿಗೆ ವಿದ್ಯಾರ್ಥಿನಿಯೊಬ್ಬರು ವಿಶೇಷವಾದ ಹಾರವೊಂದನ್ನು ಅರ್ಪಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್’ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷಃ ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್’ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಸಿದ್ದರಾಮಯ್ಯ ಅವರಿಗೆ ಹಾಕಿ ಕೃತಜ್ಞತೆ ಹೇಳಿದ್ದಾರೆ.
Also read: ಸುಪ್ರೀಂ ಕೋರ್ಟ್’ನಿಂದ ಜಾಮೀನು ರದ್ದು | ಮುರುಘಾ ಶ್ರೀ ಮತ್ತೆ ಜೈಲಿಗೆ | ಎಷ್ಟು ತಿಂಗಳು ಕಂಬಿ ಹಿಂದೆ?
ಈ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಜಯಶ್ರೀ, ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದ್ದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ ಎಂದಿದ್ದಾರೆ.
ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ವಿದ್ಯಾರ್ಥಿನಿ ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು ಎಂದಿದ್ದಾರೆ.
ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪ ಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು ಎಂದು ಹಾರೈಸಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post