ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ಉಲ್ಲಂಘಿಸಿ ಮನೆಯಿಂದ ಹೊರಬಂದವರನ್ನು ಬಂಧಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಕುರಿತಂತೆ ಉನ್ನತ ಮಟ್ಟದ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಸಿದರು. ಮಾತ್ರವಲ್ಲ ಲಾಕ್ ಡೌನ್ ಉಲ್ಲಂಘಿಸಿ ಅನಾವಶ್ಯಕವಾಗಿ ಮನೆಯಿಂದ ಹೊರಕ್ಕೆ ಬಂದರೆ ಮುಲಾಜಿಲ್ಲದೇ ಬಂಧಿಸಿ ಎಂದು ಸೂಚಿಸಿದ್ದಾರೆ.
ನಿಮ್ಮ ಏನೇ ಸಮಸ್ಯೆ ಇದ್ದರು ಕೂಡಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್’ಗಳು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ್ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
Get in Touch With Us info@kalpa.news Whatsapp: 9481252093

















