ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೋಕಸಭಾ ಚುನಾವಣೆಯಲ್ಲಿ #LoksabhaElection2024 ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಸ್ಫರ್ಧೆ ಮಾಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರು ಈಗ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #BSYediyurappa ಕುಟುಂಬದ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #BYRaghavendra ಹಲವು ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಈಶ್ವರಪ್ಪ ದಾಖಲೆ ಸಮೇತ ದೂರು ಕೊಟ್ಟಿದ್ದಾರೆ.
ದೂರು ಕೊಟ್ಟ ಬಳಿಕ ಮಾತಾಡಿದ ಈಶ್ವರಪ್ಪ, ಚುನಾವಣೆ ಸೋಲುವ ಭೀತಿಯಿಂದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರು ತಮ್ಮ ವಿರುದ್ಧ ಕೆಲವು ನಕಲಿ ಫೋಟೋ ಬಿಡುಗಡೆ ಮಾಡಿದ್ದಾರೆ. ನನ್ನದು ಮೋದಿಯವರದ್ದು ಫೋಟೋ ಹಾಕಿ ಸುಳ್ಳು ಪ್ರಚಾರ ಮಾಡಿದ್ದಾರೆ. ನಾನು ಸುದ್ದಿಗೋಷ್ಠಿ ಮಾಡುವ ರೀತಿ ನಕಲಿ ಫೋಟೋ ಹಂಚಿ ನನ್ನ ವಿರುದ್ಧ ಚುನಾವಣೆಯಲ್ಲಿ ಸಂಪೂರ್ಣ ಮೋಸ ಮತ್ತು ಅಪಪ್ರಚಾರ ಮಾಡಿದ್ದಾರೆ ಎಂದು ದೂರಿದ್ದಾರೆ.
Also read: ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
ಇದೇ ವೇಳೆ ನನ್ನನ್ನು ಬಿಜೆಪಿಯಿಂದ ತಾತ್ಕಾಲಿಕವಾಗಿ ಹೊರ ಹಾಕಿದ್ದಾರೆ. ಈ ಹಿಂದೆ ಜಗದೀಶ್ ಶೆಟ್ಟರ್ ಅವರನ್ನು ಆರು ವರ್ಷ ಹೊರ ಹಾಕಿದ್ದರು. ಯಡಿಯೂರಪ್ಪ ಹೋಗಿ ಕಾಲು ಹಿಡಿದು ಮತ್ತೆ ಕರೆತಂದರು. ನಾನು ಈ ಅಮಾನತನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನಾನು ಚುನಾವಣೆ ಗೆಲ್ಲುತ್ತೇನೆ, ಮೋದಿ ಪರ ಕೈ ಎತ್ತುತ್ತೇನೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post