ತುಮಕೂರು: ತ್ರಿವಿಧ ದಾಸೋಹಿ ಸಂತ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳು ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ ಮಾತನಾಡಿದ್ದು, ಶ್ರೀಗಳ ಶ್ವಾಸಕೋಶದ ಎರಡೂ ಭಾಗಗಳಲ್ಲಿ ನೀರು ತುಂಬಿಕೊಂಡಿದ್ದು, ಈಗಾಗಲೇ ಹೊರತೆಗೆಯಲಾಗಿದೆ. ಆದರೆ, ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆ ಕಂಡಿಲ್ಲ. ಹೀಗಾಗಿ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಶ್ರೀಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಮಲಗಿದ್ದಲ್ಲಿಯೇ ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಕೈಕಾಲುಗಳಲ್ಲಿ ಚಲನವಲನ ಇದೆ. ಆದರೆ ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಕೆಲಕಾಲ ಕೃತಕ ಉಸಿರಾಟದ ಸಾಧನ ತೆರುವುಗೊಳಿಸಿ ಸಹಜ ಉಸಿರಾಟಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎರಡು ಗಂಟೆಗಳ ಕಾಲ ಸಹಜ ಉಸಿರಾಟದ ನಂತರ ಮತ್ತೆ ತೊಂದರೆ ಕಂಡು ಬಂದರೆ ಕೃತಕ ಉಸಿರಾಟ ಸಾಧನ ಅಳವಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
Discussion about this post