ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹನ್ನೆರಡು ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಕೋವಿಡ್ ಸೇವೆಯಲ್ಲಿ ಕಾರ್ಯನಿರ್ವಹಿಸಲು ಸಮರ್ಪಕವಾದ ರಕ್ಷಣಾ ಸಾಮಗ್ರಿಗಳನ್ನು ಒದಗಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ಈಡೇರಿಸದಿರುವ ಕಾರಣ ಪ್ರತಿಭಟನೆ ನಡೆಸಿದರು.
ರಂಗಪ್ಪ ವೃತ್ತದಲ್ಲಿ ಕೆಲವು ಕಾಲ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ತಾಲೂಕು ಕಾರ್ಯದರ್ಶಿ ಎಸ್. ಆಶಾ ಸೇರಿದಂತೆ ನೂರಾರು ಕಾರ್ಯಕರ್ತೆಯರು ಹಾಜರಿದ್ದರು.
Get In Touch With Us info@kalpa.news Whatsapp: 9481252093
Discussion about this post