ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಆಗುಂಬೆಯಲ್ಲಿ ಅಪೂರ್ಣಗೊಂಡು ಹಾಳುಬಿದ್ದಿರುವ ಆಶಾಕಿರಣ ವಸತಿ ಶಾಲೆ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಜಿಪಂ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಗುಂಬೆಯಲ್ಲಿ ಅನೇಕ ವರ್ಷಗಳಿಂದ ಕೋಟ್ಯಾಂತರ ರೂ.ಗಳ ವೆಚ್ಚದಲ್ಲಿ ಅಪೂರ್ಣಗೊಂಡು ಹಾಳುಬಿದ್ದಿರುವ ಆಶಾಕಿರಣ ವಸತಿಶಾಲೆ ಕಟ್ಟಡವನ್ನು ಪೂರ್ಣಗೊಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಿದರು.
ಈ ಶಾಲಾ ಕಟ್ಟಡ ತೀರಾ ಕಳಪೆಗುಣಮಟ್ಟದ್ದಾಗಿದ್ದು, ಖರೀದಿಸಿದ ಪೀಠೋಪಕರಣಗಳೆಲ್ಲವೂ ಕಾಣೆಯಾಗಿವೆ. ಈ ಸಂಬಂಧ ತಪ್ಪಿತಸ್ತ ಅಧಿಕಾರಿಗಳು ವಿರುದ್ಧ ಕ್ರಮ ಕೈಗೊಳ್ಳಬೇಕು ಅಲ್ಲದೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
Discussion about this post