ನವದೆಹಲಿ: 2019ರ ಲೋಕಸಭಾ ಚುನಾವಣೆಯೊಂದಿಗೆ 11 ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಇಂದು ಮಾತನಾಡಿರುವ ಮುಖ್ಯನ ಚುನಾವಣಾ ಆಯುಕ್ತ ಒ.ಪಿ. ರಾವತ್, ಪ್ರಸಕ್ತ ಪರಿಸ್ಥಿತಿಯಲ್ಲಿ ಲೋಕಸಭೆಯ ಜೊತೆಗೆ ವಿಧಾನಸಭಾ ಚುನಾವಣೆಯನ್ನು ನಡೆಸಲು ಸಾಧ್ಯವಿಲ್ಲ. ಈ ರೀತಿ ಮಾಡಲು ಸಾಕಷ್ಟು ಪ್ರಕ್ರಿಯೆ ನಡೆಸಬೇಕಾದ ಅಗತ್ಯವಿದೆ. ಅಲ್ಲದೆ ಒಂದೇ ಬಾರಿಗೆ ಲೋಕಸಭೆ ಹಾಗೂ 11 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಬೇಕಾದಷ್ಟು ವಿವಿ ಪ್ಯಾಟ್ ಗಳು ನಮ್ಮ ಬಳಿ ಇಲ್ಲ. ಹೀಗಾಗಿ, ಏಕಕಾಲಕ್ಕೆ ಚುನಾವಣೆ ನಡೆಸುವುದು ಸಾಧ್ಯವಿಲ್ಲದ ವಿಚಾರ ಎಂದಿದ್ದಾರೆ.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೇ 11 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಆಯೋಗಕ್ಕೆ ಪತ್ರ ಬರೆದಿದ್ದರು. ಆದರೆ, ಆಯೋಗ ಈ ಮನವಿಯನ್ನು ತಿರಸ್ಕರಿಸಿದೆ.
Discussion about this post