ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನಿಂದ ಕರ್ನಾಟಕ ವಿಧಾನಸಭಾ ಚುನಾವಣೆಯ #AssemblyElection2023 ವಿಧಾನಸಭಾ ಕ್ಷೇತ್ರ 113 (ಶಿವಮೊಗ್ಗ ನಗರ), ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ 111ರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಉಮೇದುವಾರರು ಬೆಳಿಗ್ಗೆ 11ರಿಂದ 3 ಗಂಟೆಯವರೆಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ಶಿವಮೊಗ್ಗ #Shivamogga ನಗರ ಕ್ಷೇತ್ರ 113ರ ನಾಮನಿರ್ದೇಶನ ಪತ್ರಗಳನ್ನು ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ 111ರ ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ಶಿವಮೊಗ್ಗ ತಾಲೂಕು ಕಚೇರಿ ಆವರಣದಲ್ಲಿ ಮಾಡಿದ್ದು, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಗಳು ಅಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
ಮಹಾವೀರ ವೃತ್ತದಿಂದ ಕೋರ್ಟ್’ವರೆಗೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ರಸ್ತೆ ಸಂಚಾರ ನಿರ್ಬಂಧಿಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾನಗರ ಪಾಲಿಕೆ ಆವರಣದಲ್ಲಿ ಕೂಡ ಡಿವಿಎಸ್ ವೃತ್ತ ಮತ್ತು ವೀರಶೈವ ಕಲ್ಯಾಣ ಮಂದಿರದವರೆಗೆ ರಸ್ತೆ ಸಂಚಾರ ನಿರ್ಬಂಧಿಸಿದ್ದು, ಇದರ ಮಾಹಿತಿ ಇಲ್ಲದ ಸಾರ್ವಜನಿಕರು ಪಾಲಿಕೆ ಕೆಲಸಕ್ಕೆ ಪರದಾಡುವಂತಾಗಿದೆ.
ಚುನಾವಣಾ ಅಧಿಕಾರಿಗಳ ಕಾರ್ಯಾಲಯದಿಂದ 100 ಮೀಟರ್’ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಸಾರ್ವನಿಕರು ಕಾಲ್ನಡಿಗೆಯಲ್ಲಿ ತೆರಳಿ ತಮ್ಮ ದಿನನಿತ್ಯದ ಕಾರ್ಯ ನಿರ್ವಹಿಸಲು ಯಾವುದೇ ಅಡ್ಡಿ ಎಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಏ.13ರ ಬುಧವಾರ ಮಧ್ಯಾಹ್ನ ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post