ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ಪ್ರದೇಶದಲ್ಲಿ ಉಗ್ರರು ಇಂದು ಮಧ್ಯಾಹ್ನ ನಡೆಸಿದ ದಾಳಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದಾರೆ.
ಮಾಹಿತಿಗಳ ಅನ್ವಯ ಅರಹಂ ಗ್ರಾಮಕ್ಕೆ ತೆರಳುತ್ತಿದ್ದ ಡಿಎಸ್‌ಪಿ ಅವರಿಗೆ ಪೊಲೀಸರು ಎಸ್ಕಾರ್ಟ್ ಮಾಡುತ್ತಿದ್ದರು. ಈ ವೇಳೆ ಉಗ್ರರು ದಾಳಿ ನಡೆಸಿದ್ದು, ನಾಲ್ವರು ಪೊಲೀಸರು ವೀರಸ್ವರ್ಗ ಸೇರಿದ್ದು, ಓರ್ವ ಪೊಲೀಸ್ ಸಿಬ್ಬಂದಿಗೆ ಮಾರಣಾಂತಿಕ ಗಾಯಗಳಾಗಿವೆ.
ಇನ್ನು, ಪೊಲೀಸ್ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ, ಪೊಲೀಸ್ ಇಲಾಖೆಗೆ ಸೇರಿದ ಎಕೆ 47 ಬಂದೂಕುಗಳನ್ನು ಉಗ್ರರು ಹೊತ್ತೊಯ್ದಿದ್ದಾರೆ ಎಂದು ವರದಿಯಾಗಿದೆ.
Discussion about this post