ಮುಂಬೈ: ಇಲ್ಲಿನ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್‌ಗೆ ಸೇರಿದ ಆಯಿಲ್ ರೀಫೈನರಿಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸದ್ದು, 44 ಮಂದಿಗೆ ಗಾಯಗಳಾದ ಘಟನೆ ನಡೆದಿದೆ.
ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು ಗಾಯಗೊಂಡವರಲ್ಲಿ 22 ಮಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಇನ್ನೂ 21 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಓರ್ವ ಸಿಬ್ಬಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
#LatestVisuals: Fire broke out at Hydro Cracker plant of BPCL (Bharat Petroleum Corporation Limited) refinery, Chembur is now under control; 2 people receive minor injuries, fire fighting operation underway. #Maharashtra pic.twitter.com/gQqWR3dWxg
— ANI (@ANI) August 8, 2018
ಇಲ್ಲಿನ ಲೆವೆಲ್ 3ರಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, 9ಕ್ಕೂ ಅಧಿಕ ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
Discussion about this post