ನವದೆಹಲಿ: ಇಂದು ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಾಳೆ ಸಂಜೆ 4 ಗಂಟೆಗೆ ಯಮುನಾ ನದಿ ತಟದಲ್ಲಿರುವ ಸ್ಮೃತಿ ಸ್ಥಳದಲ್ಲಿ ನಡೆಯಲಿದೆ.
ಇಂದು ಸಂಜೆ ಕೊನೆಯುಸಿರೆಳೆದ ಅಟಲ್ ಜೀ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರ ಹಾಗೂ ಆಪ್ತರ ದರ್ಶನಕ್ಕಾಗಿ ನವದೆಹಲಿಯ 6-ಎ ಕೃಷ್ಣಾ ಮೆನನ್ ಮಾರ್ಗ್ ನಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಭೇಟಿ ನೀಡಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಾರ್ಥಿವ ಶರೀರವನ್ನು ಇಡಲಾಗುತ್ತದೆ ಎಂದು ವರದಿಯಾಗಿದೆ.
ಮಧ್ಯಾಹ್ನ 1 ಗಂಟೆಗೆ ಅಂತಿಮ ಮೆರವಣಿಗೆ ಬಿಜೆಪಿ ಕಚೇರಿಯಿಂದ ಆರಂಭವಾಗಲಿದ್ದು ಐಟಿಓ ವರೆಗೂ ನಡೆಯಲಿದೆ. ದೆಹಲಿ ಗೇಟ್, ರಾಜ್‌ಘಾಟ್ ಮಾರ್ಗವಾಗಿ ಸ್ಮೃತಿ ಸ್ಥಳಕ್ಕೆ ತರಲಿದ್ದು, ಮಧ್ಯಾಹ್ನ 4 ಗಂಟೆಗೆ ಅಂತಿಮ ವಿಧಿ ವಿಧಾನ ನಡೆಯಲಿದೆ.
Discussion about this post