ಕಲ್ಪ ಮೀಡಿಯಾ ಹೌಸ್ | ಅಥಣಿ |
ದೀಪಾವಳಿ ಬಲಿಪಾಡ್ಯಮಿ ನಿಮಿತ್ತವಾಗಿ ರಾಜ್ಯದಲ್ಲಿ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ಮಾಡಲು ರಾಜ್ಯ ಸರಕಾರ ಆದೇಶ ಮಾಡಿದ ಹಿನ್ನಲೆಯಲ್ಲಿ ಇಂದು ತಾಲೂಕಿನ ಶಿರಟ್ಟಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಸಂಗನಗೌಡ ಮಯಾಪೂರ ನೇತೃತ್ವದಲ್ಲಿ ನಿರ್ವಹಿಸಲಾಯಿತು.


ಈ ವೇಳೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಬಲಿಪಾಡ್ಯಮಿಯಂದು ಸಂಜೆ ಗೋ ಪೂಜೆ ಪೂರ್ವಜರಿಂದ ನಡೆದುಕೊಂಡು ಬಂದಿದ್ದು, ಮಹಾಭಾರತದ ಕಾಲಘಟ್ಟದಲ್ಲಿ ಕಾರ್ತಿಕ ಶುದ್ಧ ಪಾಡ್ಯದ ದಿನದಂದು ಭಗವಾನ ಶ್ರೀ ಕೃಷ್ಣ ಗೋವರ್ಧನ ಗಿರಿಯನ್ನು ಎತ್ತಿ ಹಿಡಿದು ಗೋಪಾಲಕರಿಗೆ ರಕ್ಷಣೆ ನೀಡಿದ ಎಂಬ ಪ್ರತೀತಿಯೂ ಇದೆ. ಅದಲ್ಲದೇ ಬಲಿ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು. ಅದಕ್ಕೆ ಪೂಜೆಗಳನ್ನು ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ ಸವಿನೆನಪಿಗಾಗಿ ಬಲಿಪಾಡ್ಯಮಿ ದಿವಸ ಗೋವಿಗಳಿಗೆ ಪೂಜೆ ಸಲ್ಲಿಸಲಾಗುತ್ತದೆ ಎಂದರು.


ಇನ್ನು ಉಳಿದ ರಾಜ್ಯಗಳಲ್ಲಿ ಆ ದಿನದಂದು ಹಸುವಿನ ಹಾಲನ್ನು ಕರೆಯಬಾರದೆಂಬ ಪ್ರತೀತ ಇದೆ, ಕರುಗಳು ಬೇಕಾದಷ್ಟು ಹಾಲು ಕುಡಿದು ಸಂತೋಷವಾಗಿರಬೇಕೆಂಬುದು ಇದರ ಉದ್ದೇಶವಾಗಿದೆ ಎಂದರು.


ಈ ವೇಳೆ ಪಶುವೈದ್ಯ ಡಾ.ತೇಲಿ, ಗ್ರಾಮದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು. ಹಸುಗಳಿಗೆ ಅರಶಿಣ, ಕುಂಕುಮ,ಹೂವುಗಳಿಂದ ಪೂಜಿಸಿ ಅಕ್ಕಿ ಬೆಲ್ಲ, ಬಾಳೆಹಣ್ಣು ಮತ್ತು ಹುಲ್ಲು ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















