ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಕಾವಲ್ ಬೈರಸಂಧ್ರ ನಿವಾಸದ ಮೇಲೆ ದಾಳಿ ನಡೆಸಿರುವ ಭಾರೀ ಸಂಖ್ಯೆಯ ಮುಸ್ಲಿಂ ಯುವಕರು ದಾಳಿ ನಡೆಸಿದ್ದು, ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಶಾಸಕರ ಸಂಬಂಧಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೈಗಂಬರ್ ಕುರಿತಾಗಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಇಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಶಾಸಕರ ಮನೆಯ ಮೇಲೆ ದಾಳಿ ನಡೆಸಿದ ಯುವಕರ ಗುಂಪು ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಅಲ್ಲದೇ, ರಸ್ತೆಯಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಇಡಿಯ ಪ್ರದೇಶದಲ್ಲಿ ಉದ್ರಿಕ್ತ ವಾತಾವರಣೆ ನಿರ್ಮಾಣವಾಗಿದೆ.
ಪೋಸ್ಟ್ ಹಾಕಿದ ಯುವಕ ಹಾಗೂ ಶಾಸಕರನ್ನು ಕೂಡಲೇ ಬಂಧಿಸಬೇಕು ಎಂದು ಘೋಷಣೆ ಕೂಗಲಾಗಿದೆ.
Get In Touch With Us info@kalpa.news Whatsapp: 9481252093















