ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಕಾವೇರಿನ ನದಿಯ ಉಗಮ ಸ್ಥಾನ, ಪವಿತ್ರ ಕ್ಷೇತ್ರ ತಲಕಾವೇರಿ ದೇವಾಲಯಕ್ಕೆ ಜ.22ರಂದು ಪ್ರವೇಶ ನಿಷೇಧಿಸಲಾಗಿದೆ.
ಈ ಕುರಿತಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಅವರು ಮಾಹಿತಿ ಪ್ರಕಟಿಸಿದ್ದು, ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಜನವರಿ 22 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಭಕ್ತಾಧಿಗಳು ಸಹಕರಿಸಬೇಕು ಎಂದು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















