Read - < 1 minute
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಅತ್ಯಂತ ಅಚ್ಚುಮೆಚ್ಚಿನ ತಾಣವಾದ ಸಕ್ರೆಬೈಲು ಆನೆ ಬಿಡಾರಕ್ಕೆ ಇದೇ ಸೋಮವಾರ ಅಂದರೆ ಫೆ.4ರಂದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಆನೆ ಕಾವಾಡಿಗಳ ನೇರ ನೇಮಕಾತಿ ಸಂದರ್ಶನ ಪ್ರಕ್ರಿಯೆಗಳು ಸೋಮವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಆನೆ ಬಿಡಾರಕ್ಕೆ ಅಂದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜೆ. ಚಂದ್ರಶೇಖರ ತಿಳಿಸಿದ್ದಾರೆ.
Discussion about this post