ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದು, ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದೆ. ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post