No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡಿಗರೇ, ಶಿವಮೊಗ್ಗದ ಈ ಸ್ಥಳಗಳನ್ನು 7 ಅದ್ಬುತಗಳ ಸಾಲಿಗೆ ಸೇರಿಸಲು ಇದು ಸುವರ್ಣಾವಕಾಶ

ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ: ಇದರಲ್ಲಿ ನೀವು ಪಾಲ್ಗೊಳ್ಳಿ | ನಮ್ಮ ಜಿಲ್ಲೆಯ ಈ ನಾಲ್ಕು ಅದ್ಭುತಗಳಿಗೆ ವೋಟ್ ಮಾಡಿ: ಯಾವುವು ಆ ಸ್ಥಳಗಳು?

kalpa News by kalpa News
August 17, 2022
in ಶಿವಮೊಗ್ಗ
0
ಮಲೆನಾಡಿಗರೇ, ಶಿವಮೊಗ್ಗದ ಈ ಸ್ಥಳಗಳನ್ನು 7 ಅದ್ಬುತಗಳ ಸಾಲಿಗೆ ಸೇರಿಸಲು ಇದು ಸುವರ್ಣಾವಕಾಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಶಿವಮೊಗ್ಗದ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.

ಶಿವಮೊಗ್ಗ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ  ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.
ಶಿವಮೊಗ್ಗದ ನಾಮ ನಿರ್ದೇಶನಗಳು
ರಾಜ, ರಾಕೆಟ್‌, ರೋರರ್‌, ಲೇಡಿ ಎಂಬ ಶರಾವತಿಯ ನಾಲ್ಕು ಧಾರೆಗಳು ಅಬ್ಬರಿಸಿ ಭೋರ್ಗರೆಯುವ ಜಗತ್ಪ್ರಸಿದ್ಧ ಜೋಗ ಜಲಪಾತ. ಸಹ್ಯಾದ್ರಿ ಶ್ರೇಣಿಯ ಮಳೆಕಾಡಿನಲ್ಲಿರುವ ಸಮುದ್ರಮಟ್ಟದಿಂದ 1354 ಮೀಟರ್‌ ಎತ್ತರದಲ್ಲಿರುವ ಚಾರಣಿಗರ ನೆಚ್ಚಿನ ತಾಣ ಕೊಡಚಾದ್ರಿ ಬೆಟ್ಟ. ದಕ್ಷಿಣದ ಚಿರಾಪುಂಜಿ ಎಂಬ ಹಿರಿಮೆ ಹೊಂದಿದ್ದ ಅದ್ಭುತ ಪ್ರಕೃತಿ ಸೌಂದರ್ಯದ, ಸೂರ್ಯಾಸ್ತ ವೀಕ್ಷಣೆಗೂ ಪ್ರಸಿದ್ಧವಾದ ತಾಣ ಆಗುಂಬೆ ಘಾಟಿ. 1500 ವರ್ಷ ಹಳೆಯ, ಹಲ್ಮಿಡಿಗಿಂತಲೂ ಪುರಾತನವಾದ ಶಾಸನ ತಾಳಗುಂದ ಶಿಲಾ ಶಾಸನ.

ಈಗಾಗಲೇ https://www.7wondersofkarnataka.comನಲ್ಲಿ ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಶಿವಮೊಗ್ಗದ ಈ ನಾಲ್ಕು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.

ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ಶಿವಮೊಗ್ಗ ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು.ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.

ಏನಿದು ಅಭಿಯಾನ?
ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್’ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.
‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ‘ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈ ಅಭಿಯಾನ.

ಯಾವ ಹಂತದಲ್ಲಿದೆ ಅಭಿಯಾನ?
ಮೇ ತಿಂಗಳಲ್ಲಿ ಚಾಲನೆ ದೊರೆತಿರುವ ಆರು ಹಂತದ ಈ ಅಭಿಯಾನ ಎರಡನೇ ಹಂತಕ್ಕೆ ತಲುಪಿದೆ. ಮೊದಲ ಹಂತದಲ್ಲಿ ಸಾರ್ವಜನಿಕರು ವೆಬ್‌ಸೈಟ್ ಮೂಲಕ ತಮ್ಮ ನೆಚ್ಚಿನ ಊರು, ಜಿಲ್ಲೆ, ತಾಲೂಕು ಸೇರಿ ರಾಜ್ಯದ ಯಾವುದೇ ಜಾಗದಲ್ಲಿ ತಾವು ನೋಡಿದ ಅದ್ಭುತ ಪ್ರವಾಸೀ ಸ್ಥಳ, ಪಾರಂಪರಿಕ ತಾಣ, ಅತ್ಯಾಧುನಿಕ ಕಟ್ಟಡ, ರಸ್ತೆ ಹೀಗೆ ಅದ್ಭುತ ಎನಿಸುವ ಸ್ಥಳದ ಫೋಟೊ ಅಪ್‌ಲೋಡ್ ಮಾಡಿ ಆ ಸ್ಥಳದ ವೈಶಿಷ್ಟ್ಯವನ್ನು ದಾಖಲು ಮಾಡಿ ನಾಮನಿರ್ದೇಶನ ಮಾಡಿದ್ದಾರೆ.

ಇದೀಗ, ಎರಡನೇ ಹಂತದಲ್ಲಿ ಸಾರ್ವಜನಿಕರಿಂದ ನಾಮನಿರ್ದೇಶನಗೊಂಡ ಅದ್ಭುತಗಳಲ್ಲಿ 100 ಸ್ಥಳಗಳನ್ನು ಆಯ್ಕೆ ಮಾಡಿ, ಅತ್ಯದ್ಭುತ ತಾಣಗಳು ಯಾವುವು ಎಂಬ ಬಗ್ಗೆ ವೋಟಿಂಗ್‌ ನಡೆಯುತ್ತಿದೆ.

ವೋಟಿಂಗ್ ನಿಯಮ:

  • ಆಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು
  • ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ
  • ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ
  • ತನ್ಮೂಲಕ  ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 7 Wonders of KarnatakaAgumbe GhatJog FallsKannada News WebsiteKodachadri HillsLatest News KannadaSeven Wonders of KarnatakaShimogaShivamoggaShivamogga NewsTalagunda Shasanaಆಗುಂಬೆ ಘಾಟಿಕರುನಾಡಿನ ಏಳು ಅದ್ಭುತಕರ್ನಾಟಕದ ಏಳು ಅದ್ಭುತಕೊಡಚಾದ್ರಿ ಬೆಟ್ಟಜೋಗ ಜಲಪಾತತಾಳಗುಂದ ಶಿಲಾ ಶಾಸನವಿಶ್ವದ ಏಳು ಅದ್ಭುತಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆ.17ರಂದು ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ: ಜಿಲ್ಲಾಧಿಕಾರಿ ಸ್ಪಷ್ಟನೆ

Next Post

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

kalpa News

kalpa News

Next Post
ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL