ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೆ. 26 ಮತ್ತು 27 ರಂದು ಶಿವಮೊಗ್ಗ #Shivamogga ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ಜಾತ್ರೆ ನಡೆಯಲಿದ್ದು, ಈ ಮಾರ್ಗದ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #GurudattaHegde ಅವರು ಆದೇಶ ಹೊರಡಿಸಿದ್ದಾರೆ.
Also Read>> ಅಗತ್ಯವಾಗಿ ನೋಡಲೇಬೇಕಾದ ನಾಟಕ “ಮೈ ಫ್ಯಾಮಿಲಿ”
ಫೆ. 26 ರ ಬೆಳಗಿನ ಜಾವ 4 ರಿಂದ 27ರ ಬೆಳಗಿನ ಜಾವದವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ #TrafficDiversion ಮಾಡಲು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್’ಎಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರಬೇಕು.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಎನ್’ಎಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್’ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರಬೇಕು ಎಂದು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post