ಕಲ್ಪ ಮೀಡಿಯಾ ಹೌಸ್ | ಸೊರಬ |
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತಾಲೂಕು ಘಟಕದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಆಗಸ್ಟ್ 14ರಂದು ಸಂಜೆ 6 ಗಂಟೆಗೆ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯು ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಿ ಪಟ್ಟಣದ ಮುಖ್ಯರಸ್ತೆ ಮಾರ್ಗವಾಗಿ ಖಾಸಗಿ ಬಸ್ ನಿಲ್ದಾಣದವರೆಗೆ ಸಾಗಲಿದೆ.
ಭಾರತಮಾತೆಯ ಭಾವಚಿತ್ರದೊಂದಿಗೆ ನಡೆಯುವ ಈ ಪಂಜಿನ ಮೆರವಣಿಗೆಗೆ ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.
ಭಜರಂಗದಳದ ಪ್ರಾಂತ ಸಂಯೋಜಕ ಪ್ರಭಂಜನ ದಿಕ್ಕೂಚಿ ಭಾಷಣ ಮಾಡುವರು. ಪುರನಾಗರಿಕರು ಹಾಗೂ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: ಸಾತ್ವಿಕ್, ಕಾರ್ಯದರ್ಶಿ – ವಿಶ್ವ ಹಿಂದೂ ಪರಿಷತ್/ಭಜರಂಗದಳ, ಸೊರಬ ಪ್ರಖಂಡ – 📞 9008100474
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post