ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಆಯನೂರು ಮಂಜುನಾಥ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಪರಿಷತ್’ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್, ನಂತರದ ಬೆಳವಣಿಗೆಯಲ್ಲಿ ರಾಜೀನಾಮೆ ನೀಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಇದೇ ಜೂನ್ ತಿಂಗಳಿನಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಆಯನೂರು ಅವರ ಹೆಸರೇ ಫೈನಲ್ ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post