ಕಲ್ಪ ಮೀಡಿಯಾ ಹೌಸ್ | ಅಯೋಧ್ಯೆ |
ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ #Rama Mandir ನಿರ್ಮಾಣ ಕಾರ್ಯ ಸಂಫೂರ್ಣಗೊಂಡ ಹಿನ್ನೆಲೆಯಲ್ಲಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ಇಂದು ಸ್ಥಾಪಿಸಿ, ಹಾರಿಸಿದ್ದಾರೆ.
ಹಿಂದೂ ಸಂಪ್ರದಾಯದ ಪ್ರಕಾರ ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ಮೋದಿಯರವು ಧ್ವಜಾರೋಹಣ ನೆರವೇರಿಸಿದ್ದು, ಸನಾತನ ಧರ್ಮದ ಇತಿಹಾಸದಲ್ಲಿ ಇಂದು ಐತಿಹಾಸಿಕ ದಿನವಾಗಿದೆ.

ಧ್ವಜಾರೋಹಣ ಸಮಯದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಆರ್’ಎಸ್’ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
ಧ್ವಜಾರೋಹಣ ಸಮಾರಂಭಕ್ಕೂ ಮುನ್ನ, ಪ್ರಧಾನಿ ಮೋದಿಯವರು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವಾಲಯ ಸಂಕೀರ್ಣದವರೆಗೆ ರೋಡ್ ಶೋ ನಡೆಸಿದರು.

ಪ್ರಧಾನಿಯವರು ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಹೆಜ್ಜೆ ಹೆಜ್ಜೆಗೂ ಭದ್ರತೆ ಕಲ್ಪಿಸಲಾಗಿದೆ.
ಪ್ರಧಾನಿಯವರ ಬೆಂಗಾವಲು ಪಡೆ ಹಾದು ಹೋಗುವಾಗ ಮಹಿಳೆಯರು ಮತ್ತು ಯುವಕರು ಸೇರಿದಂತೆ ಹೆಚ್ಚಿನ ಸಂಖ್ಯೆಯ ನಿವಾಸಿಗಳು ಮತ್ತು ಭಕ್ತರು ಮಾರ್ಗದುದ್ದಕ್ಕೂ ಸಾಲುಗಟ್ಟಿ ನಿಂತು ಹೂವಿನ ಮಳೆಯನ್ನೇ ಸುರಿಸಿರು. ಹಲವರು ತ್ರಿವರ್ಣ ಧ್ವಜವನ್ನು ಬೀಸಿದರು.
ಮುಖ್ಯ ಕಾರ್ಯಕ್ರಮಕ್ಕೆ ಹೋಗುವ ಮೊದಲು, ಪ್ರಧಾನಿ ಮೋದಿಯವರು ರಾಮ ಜನ್ಮಭೂಮಿ ಮಂದಿರ ಸಂಕೀರ್ಣದೊಳಗಿನ ಸಪ್ತ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ರಾಮಮಂದಿರದ ಶಿಖರದ ಮೇಲೆ ಸ್ಥಾಪಿಸಲಾಗಿರು ಧ್ವಜಸ್ತಂಭ 42 ಅಡಿ ಎತ್ತರ ಇದ್ದು, 360 ಡಿಗ್ರಿ ತಿರುಗುವಂತೆ ವಿನ್ಯಾಸಗೊಳಿಸಲಾಗಿದೆ.
ಧ್ವಜವು ಕೇಸರಿ ಬಣ್ಣ ಹಾಗೂ ತ್ರಿಕೋನಾಕೃತಿಯಲ್ಲಿದ್ದು, 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದೆ.
ಪ್ರಮುಖವಾಗಿ, ಧ್ವಜದ ಮೇಲೆ ಸೂರ್ಯ, ‘ಓಂ’ ಹಾಗೂ ಕೋವಿದಾರ ಮರವನ್ನು ಚಿತ್ರಿಸಲಾಗಿದೆ. ಸೂರ್ಯನ ಚಿತ್ರ ರಾಮನ ವಂಶವಾದ ಸೂರ್ಯವಂಶವನ್ನು ಸೂಚಿಸುತ್ತದೆ. `ಓಂ’ ಶುಭಸೂಚಕವಾಗಿದ್ದು, ಕೋವಿದಾರ ಮರವು ಅಯೋಧ್ಯೆಯ ಪ್ರಾಚೀನ ಸಂಪ್ರದಾಯಗಳನ್ನು ಪ್ರತಿನಿಧಿಸುತ್ತದೆ.

- ರಾಮಮಂದಿರದ ಮೇಲೆ ಹಾರಾಡುತ್ತಿರುವ ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ.
- ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ
- ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.
- 25 ದಿನಗಳಲ್ಲಿ ಧ್ವಜ ತಯಾರಿಸಲಾಗಿದ್ದು, ಮೂರು ಪದರಗಳ ಬಟ್ಟೆಯಿಂದ ತಯಾರಿಸಲಾಗಿದೆ. ಇದರಲ್ಲಿ ಬಳಸಲಾದ ಪ್ರತಿಯೊಂದು ಅಂಶವೂ ಸ್ಥಳೀಯವಾಗಿದ್ದು, ಧ್ವಜ ತುಂಬಾ ವಿಶೇಷವಾಗಿದೆ.
- ಅಂಚುಗಳನ್ನು ಗೋಲ್ಡನ್ ರೇಷ್ಮೆಯಿಂದ ಮಾಡಲಾಗಿದ್ದು, ಎಲ್ಲಾ ಚಿಹ್ನೆಗಳು ಕೈಯಿಂದ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post