ಕಲ್ಪ ಮೀಡಿಯಾ ಹೌಸ್ | ಅಯೋಧ್ಯಾ |
ಅಯೋಧ್ಯೆ Ayodhya ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಅಯೋಧ್ಯೆ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ PMNarendraModi ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ CMYogiAdithyanath ಆತ್ಮೀಯವಾಗಿ ಬರಮಾಡಿಕೊಂಡರು.
ನಂತರ ಸುಮಾರು 15 ಕಿಲೋ ಮೀಟರ್ ದೂರ ಮೋದಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಅಪಾರ ಜನಸ್ತೋಮ ಸೇರಿತ್ತು. ವಿಮಾನ ನಿಲ್ದಾಣದಿಂದ ಪುನರಾಭಿವೃದ್ಧಿಗೊಂಡ ರೈಲು ನಿಲ್ದಾಣದವರೆಗೆ ಜನರತ್ತ ಕೈ ಬೀಸುತ್ತಾ ಸಾಗಿದರು. ಹಾಗೂ ತಮ್ಮ ರೋಡ್‌ಶೋ ಮಾರ್ಗದಲ್ಲಿ ಸಾಂಸ್ಕೃತಿಕ ತಂಡಗಳ ಪ್ರದರ್ಶನಗಳನ್ನು ವೀಕ್ಷಿಸಿದರು.

Also read: ಸೊರಬ | ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು
ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಸುಮಾರು 11,100 ಕೋಟಿ ರೂಪಾಯಿಗಳ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಕಾಮಗಾರಿಗಳಿಗೆ ಸಂಬಂಧಿಸಿದ ಸುಮಾರು 4,600 ಕೋಟಿ ರೂಪಾಯಿಗಳ ಯೋಜನೆಗಳು ಸೇರಿದಂತೆ ಉತ್ತರ ಪ್ರದೇಶಕ್ಕೆ 15, 700 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.











Discussion about this post