ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಶಿವಪ್ಪನಾಯಕ ವೃತ್ತದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಕಾರ್ಯಕರ್ತರು ಪುಷ್ಪ ನಮನ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯಕರ್ತರು, ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಯು ಸಮಸ್ತ ಭಾರತೀಯರು ಹೆಮ್ಮೆ ಪಡುವ ಸಂತಸದ ಕ್ಷಣ. ಈ ಶುಭಗಳಿಗೆಗಾಗಿ ಪರಿಶ್ರಮಿಸಿದ ಎಲ್ಲಾ ರಾಜಕೀಯ ನೇತಾರರಿಗೂ, ನ್ಯಾಯಾಂಗದ ಪ್ರತಿನಿಧಿಗಳಿಗೂ, ಕಾರ್ಯಾಂಗದ ಎಲ್ಲಾ ಅಧಿಕಾರಿಗಳಿಗೂ, ನಿಷ್ಪಕ್ಷಪಾತ ನಡವಳಿಕೆಯ ಮಾಧ್ಯಮ ಮಿತ್ರರಿಗೂ ಅಭಿನಂದನೆ ಸಲ್ಲಿಸುತ್ತೇವೆ. ವಿಶೇಷವಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ದೇಶದ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರ ಕಾಂಗ್ರೆಸ್ಸಿನ ಹೆಬ್ಬಯಕೆ ರಾಮಮಂದಿರ ರಾಜೀವ್ ಗಾಂಧಿ ರವರ ಕನಸು, ಸರ್ವಧರ್ಮ ಸಮನ್ವಯದ ಬಲಿಷ್ಠ ಭಾರತ ರೂಪುಗೊಳ್ಳಲಿ ಎಂಬುದು ಪ್ರತಿಯೊಬ್ಬ ಭಾರತೀಯನ ಅಭಿಲಾಷೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಪ್ರವೀಣ್ ಕುಮಾರ್, ನಗರಾಧ್ಯಕ್ಷ ಎಚ್.ಪಿ. ಗಿರೀಶ್, ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ. ಯೋಗೀಶ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಟಿ.ವಿ. ರಂಜಿತ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶರವಣ, ಡಿ.ಆರ್. ಗಿರೀಶ್, ನಗರ ಉಪಾಧ್ಯಕ್ಷರಾದ ಪುಷ್ಪಕ್ ಕುಮಾರ್, ಕುಮರೇಶ್, ಪ್ರಧಾನ ಕಾರ್ಯದರ್ಶಿಗಳಾದ ಶಶಾಂಕ್ ಗೌಡ, ಎಂಎಲ್ ಮುರಳಿ, ರಾಕೇಶ್, ಸೂರ್ಯ, ಶಂಕರ್, ಸಚಿನ್, ಪ್ರಭು ಇತರರು ಇದ್ದರು.
Get In Touch With Us info@kalpa.news Whatsapp: 9481252093
Discussion about this post