ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಯತ್ನಿಸಿದ ಮಹಿಳೆಯರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಅಯ್ಯಪ್ಪ ಭಕ್ತರ ಪ್ರತಿಭಟನೆಯ ಬಿಸಿ ಈಗ ಕೇರಳ ಸಿಎಂಗೂ ಸಹ ತಟ್ಟಿದೆ.
ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಆಗಮಿಸಿದ ಸುಮಾರು 70ಕ್ಕೂ ಅಧಿಕ ಭಕ್ತರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರೀ ಪ್ರತಿಭಟನೆ ನಡೆಸಲಾಗುತ್ತಿದೆ.
ಭಕ್ತರ ಬಂಧನ ಮಾಹಿತಿ ಹಿನ್ನೆಲೆಯಲ್ಲಿ ತಿರುವನಂತಪುರಂನಲ್ಲಿರುವ ಮುಖ್ಯಮಂತ್ರಿ ಅಧಿಕೃತ ನಿವಾಸಕ್ಕೆ ಪ್ರತಿಭಟನಾಕಾರರು ಭಾರೀ ಸಂಖ್ಯೆಯಲ್ಲಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿ, ಸಿಎಂ ವಿರುದ್ದ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಇನ್ನು, ಸರ್ಕಾರದ ಕ್ರಮದ ವಿರುದ್ದ ಆರ್‌ಎಸ್‌ಎಸ್, ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳೂ ನಿರಂತರವಾಗಿ ಪ್ರತಿಭಟನೆ ನಡೆಸುತ್ತಲೇ ಇವೆ.
Rani KoHEnur Calls Transgender Bill “Absurd”, Questions Lawmakers in Explosive Podcast Interview
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetails















