ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ #DKShivakumar ಪದಗ್ರಹಣ ಮಾಡಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ ಪಕ್ಷದ ನೂತನ ಸಾರಥಿಯನ್ನಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ #KPCC ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ #BKHariprasad ಅವರನ್ನು ನೇಮಕ ಮಾಡಿದೆ.
Also Read>> ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ #AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿದ್ದಾರೆ.
ರಾಜೀನಾಮೆಯ ಬೆನ್ನಲ್ಲೇ ತಕ್ಷಣ ಕ್ರಮ ಕೈಗೊಂಡಿರುವ ಖರ್ಗೆ ಅವರು, ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದು, ತಕ್ಷಣದಿಂದಲೇ ಬಿ.ಕೆ. ಹರಿಪ್ರಸಾದ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Also Read>> ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ
ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಇಬ್ಬರೂ ಈ ಹುದ್ದೆಗೆ ಪ್ರಮುಖ ಆಕಾಂಕ್ಷಿಗಳಾಗಿದ್ದರು.
ಆದರೆ ಕಾಂಗ್ರೆಸ್ ಹೈಕಮಾಂಡ್ ಜಾರಿಗೆ ತಂದಿರುವ ‘ಒಬ್ಬರಿಗೆ ಒಂದೇ ಸ್ಥಾನಮಾನ’ ನೀತಿಯ ಹಿನ್ನೆಲೆ, ಈಗಾಗಲೇ ಸಚಿವರಾಗಿರುವ ಇವರಿಬ್ಬರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿಲ್ಲ. ಹೀಗಾಗಿ ಯಾವುದೇ ಸಚಿವ ಸ್ಥಾನದಲ್ಲಿಲ್ಲದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಪಕ್ಷ ಸಂಘಟನೆಯ ಹೊಣೆಗಾರಿಕೆ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















