ಹೊಸನಗರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಘೋಷಣೆಯಾಗಿರುವ ಬಿ.ವೈ. ರಾಘವೇಂದ್ರ ಇಂದು ಕೊಲ್ಲೂರು ಮೂಕಾಂಬಿಕೆ ಹಾಗೂ ಹೊಸನಗರ ಕಾರಣಗಿರಿ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಂದು ಹೊಸನಗರ ತಾಲೂಕಿನಲ್ಲಿರುವ ಸುಪ್ರಸಿದ್ದ ಕಾರಣಗಿರಿ ಸಿದ್ದಿ ವಿನಾಯಕ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ರಾಘವೇಂದ್ರ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ಆನಂತರ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿದ ಅವರು, ನವರಾತ್ರಿ ಆರಂಭದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೈಂದೂರು ಶಾಸಕ ಸುಕುಮಾರಶೆಟ್ಟಿ ಜೊತೆಯಲ್ಲಿದ್ದರು.

















