ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪಕ್ಷ ಇಂದು ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪದಾಧಿಕಾರಿಗಳ ವಿವರ ಹೀಗಿದೆ:
ರಾಜ್ಯ ಉಪಾಧ್ಯಕ್ಷಕರು:
ರಾಜ್ಯ ಉಪಾಧ್ಯಕ್ಷರಾಗಿ, ಬಿವೈ ವಿಜಯೇಂದ್ರ ಅರವಿಂದ ಲಿಂಬಾವಳಿ, ನಿರ್ಮಲ್ ಕುಮರ್ ಸುರಾನಾ, ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇರ್ದಾ, ತೇಜಸ್ವಿನಿ ಅನಂತಕುರ್ಮಾ, ಪ್ರತಾಪ ಸಿಂಹ, ಎಂ.ಬಿ. ನಂದೀಶ್, ಎಂ. ಶಂಕರಪ್ಪ, ಎಂ. ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿಗಳು:
ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಎನ್. ರವಿಕುಮಾರ್, ಸಿದ್ದರಾಜು, ಅಶ್ವಥ್ ನಾರಾಯಣ, ಮಹೇಶ್ ತೆಂಗಿನಕಾಯಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿಗಳು:
ರಾಜ್ಯ ಕಾರ್ಯದರ್ಶಿಗಳಾಗಿ ಸತೀಶ್ ರೆಡ್ಡಿ, ತುಳಸಿ ಮುನಿರಾಜು ಗೌಡ, ಎಸ್.
ರಾಜ್ಯ ಖಜಾಂಚಿಗಳು:
ರಾಜ್ಯ ಖಜಾಂಚಿಗಳಾಗಿ ಸುಬ್ಬ ನರಸಿಂಹ, ಲೆಹರ್ ಸಿಂಗ್ ಸಿರೋಯಾ ಅವರನ್ನು ನೇಮಕ ಮಾಡಲಾಗಿದೆ.
ಮೋರ್ಚಾ ರಾಜ್ಯ ಅಧ್ಯಕ್ಷರು:
ಯುವ ಮೋರ್ಚಾ ಅಧ್ಯಕ್ಷರಾಗಿ ಡಾ. ಸಂದೀಪ್, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಗೀತಾ ವಿವೇಕಾನಂದ, ರೈತ ಮೋರ್ಚಾ ಅಧ್ಯಕ್ಷರಾಗಿ ಈರಣ್ಣ ಕಡಾಡಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಅಶೋಕ ಗಸ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಚಲವಾದಿ ನಾರಾಯಣಸ್ವಾಮಿ, ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ತಿಪ್ಪರಾಜು ಹವಾಲ್ದಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮುಜಮಿಲ್ ಬಾಬು ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೇಕಲ್ಲು, ರಾಜ್ಯ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ. ಪ್ರಕೋಷ್ಟಗಳ ಸಂಯೋಜಕರಾಗಿ ಎಂ.ಬಿ. ಭಾನುಪ್ರಕಾಶ್, ಡಾ.ಎ.ಎಚ್. ಶಿವಯೋಗಿಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post