ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದೋಷಮುಕ್ತರಾಗಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಜೈ ಶ್ರೀರಾಮ್ ಎಂದು ಹೇಳುವ ಮೂಲಕ ಭಾವುಕರಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ತೀರ್ಪಿನ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತೀರ್ಪು ಸಂತಸ ತಂದಿದೆ. ವಿಶೇಷ ನ್ಯಾಯಾಲಯದ ತೀರ್ಪನ್ನು ನಾನು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇನೆ. ಈ ತೀರ್ಪು ರಾಮ್ ಜನ್ಮಭೂಮಿ ಚಳವಳಿಯ ಬಗ್ಗೆ ನನ್ನ ವೈಯಕ್ತಿಕ ಮತ್ತು ಬಿಜೆಪಿಯ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ. ಜೈ ಶ್ರೀರಾಮ್ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post