ಕಲ್ಪ ಮೀಡಿಯಾ ಹೌಸ್ | ಲಖನೌ |
ವಾರಣಾಸಿಯ ಜ್ಞಾನವಾಪಿ ಮಸೀದಿ #GyanavapiMasjid ಸ್ಥಳವನ್ನು ಮರಳಿ ಪಡೆಯುವಲ್ಲಿ ಹಿಂದೂಗಳಿಗೆ ಮಹತ್ವದ ಬೆಳವಣಿಗೆಯಾಗಿದ್ದು, ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಂದ #Hindu ಪೂಜೆ ನಡೆಸುವುದಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಮಸೀದಿಯ ನೆಲಮಹಡಿಯಲ್ಲಿರುವ ಹಿಂದೂ ಮೂರ್ತಿಗೆ ಪೂಜೆ ಮಾಡಲು ವಾರಣಾಸಿ #Varanasi ಜಿಲ್ಲಾ ನ್ಯಾಯಾಲಯ ನೀಡಿದ್ದ ಅವಕಾಶವನ್ನು ಪ್ರಶ್ನಿಸಿ, ಮುಸ್ಲಿಂ ಸಮಿತಿ ಹೈಕೋರ್ಟ್ ಮೆಟ್ಟಿಲೇರಿತ್ತು.

ನ್ಯಾ.ರೋಹಿತ್ ರಂಜನ್ ಅಗರ್ವಾಲ್ ಜ್ಞಾನವಾಪಿ ಮಸೀದಿಯಲ್ಲಿನ ಪೂಜೆಗೆ ಅವಕಾಶದ ಕುರಿತು ತೀರ್ಪು ಪ್ರಕಟಿಸಿದ್ದಾರೆ. ಹಿಂದೂ ಹಾಗೂ ಮುಸ್ಲಿಮ್ ಪರ ವಾದ ವಿವಾದಗಳನ್ನು ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 11 ದಿನಗಳ ಬಳಿ ಇದೀಗ ವಾರಣಾಸಿ ಜಿಲ್ಲಾ ನ್ಯಾಯಾಲಯ ಆದೇಶವನ್ನು ಎತ್ತಿ ಹಿಡಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post