ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಉಕ್ಕಿನ ನಗರದಲ್ಲೂ ಬುರ್ಖಾ ವಿರುದ್ಧ ಹಿಂದೂ ವಿದ್ಯಾರ್ಥಿಗಳ ಹೋರಾಟ ನಗರದಲ್ಲೂ ಆರಂಭಗೊಂಡಿದ್ದು, ನಗರದ ನ್ಯೂಟೌನ್ ಸರ್.ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಈ ಸಂಬಂಧ ಹೋರಾಟ ಆರಂಭಗೊಂಡಿದ್ದು, ಇಂದೂ ಸಹ ಇದು ಮುಂದುವರೆದಿತ್ತು.
ಕಾಲೇಜಿಗೆ ಅನ್ಯ ಕೋಮಿನ ವಿದ್ಯಾರ್ಥಿನಿಯರು ಬುರ್ಖಾ ಧರಿಸಿಕೊಂಡು ಬರುತ್ತಿರುವವರನ್ನು ಹೊರ ಹಾಕುವಂತೆ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿರುವ ಕೆಲ ಸಂಘಟನೆಗಳ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಅಹಿತಕರ ವಾತಾವರಣ ನಿರ್ಮಾಣಗೊಂಡಿತ್ತು.
ಬುರ್ಖಾ ಧರಿಸಿದ ವಿದ್ಯಾರ್ಥಿನಿಯರು ಬರುವುದಾದರೇ ನಾವು ಸಹ ಕೇಸರಿ ವಸ್ತ್ರದೊಂದಿಗೆ ಕಾಲೇಜಿಗೆ ಬರುವುದಾಗಿ ಹಠಕ್ಕೆ ಬಿದ್ದಿರುವ ವಿದ್ಯಾರ್ಥಿಗಳು ಇಂದು ಕೇಸರಿ ಶಲ್ಯಧರಿಸಿ ಕಾಲೇಜಿಗೆ ಆಗಮಿಸಿದ್ದು, ಇದರಿಂದಾಗಿ ಮತ್ತಷ್ಟು ಬಿಗುವಿನ ವಾತಾವರಣ ಉಂಟಾಗಿದೆ. ಈ ಮಧ್ಯೆ ಪೊಲೀಸರು ಸ್ಥಳದಲ್ಲಿ ಬಿಡುಬಿಟ್ಟಿದ್ದಾರೆ.
ಬುರ್ಖಾ ಹೋರಾಟ ರೂಪುಗೊಳ್ಳಲು ಕಾರಣ?
ಕಳೆದ ಕೆಲವು ದಿನಗಳ ಹಿಂದೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅನ್ಯ ಕೋಮಿನ ವಿದ್ಯಾರ್ಥಿನಿಯೋರ್ವಳೊಂದಿಗೆ ವಿದ್ಯಾರ್ಥಿಯೋರ್ವ ಮಾತನಾಡುತ್ತಿದ್ದಾನೆಂಬ ಕಾರಣಕ್ಕೆ ಆ ವಿದ್ಯಾರ್ಥಿ ಮೇಲೆ ಅನ್ಯ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಉಂಟಾದ ವಿವಾದ ಇದೀಗ ಬುರ್ಖಾ ವಿರುದ್ಧದ ಹೋರಾಟಕ್ಕೆ ಕಾರಣ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post