ಕಲ್ಪ ಮೀಡಿಯಾ ಹೌಸ್ | ಮುಧೋಳ(ಬಾಗಲಕೋಟೆ) |
ಬಾಗಲಕೋಟೆಯ #Bagalakote ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಉಗ್ರ ರೂಪಕ್ಕೆ ತಿರುಗಿದ್ದು, ಕಬ್ಬು ತುಂಬಿದ್ದ ಸುಮಾರು 50ಕ್ಕೂ ಅಧಿಕ ಟ್ರಾಕ್ಟರ್’ಗಳಿಗೆ ಬೆಂಕಿ ಹಚ್ಚಲಾಗಿದೆ.
ಕಬ್ಬು #SugarCane ತುಂಬಿದ್ದ ಸುಮಾರು 50ಕ್ಕೂ ಅಧಿಕ ಟ್ರಾಕ್ಟರ್’ಗಳಿಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿರುವ ರೈತರು, ಸಕ್ಕರೆ ಕಾರ್ಖಾನೆ #SugarFactory ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಆದರೆ, ಸದ್ಯ 3250 ರೂ. ಈಗ ನೀಡಿ, ಬಾಕಿ 50 ರೂ.ಗಳನ್ನು ನಂತರ ನೀಡುವುದಾಗಿ ಸಕ್ಕರೆ ಕಾರ್ಖಾನೆಗಳು ಹೇಳಿವೆ ಎಂದು ವರದಿಯಾಗಿದೆ. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಬ್ಬು ಬೆಳೆಗಾರರು 3300 ರೂಪಾಯಿಗಳನ್ನು ಒಟ್ಟಿಗೆ ನೀಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಯಿಂದ ಸಿಎಂಗೆ ಮಾಹಿತಿ
ಇನ್ನು, ಕಬ್ಬು ಬೆಳೆಗಾರರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಅವರು ಬಾಗಲಕೋಟೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಆದಷ್ಟು ಶೀಘ್ರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಸಿಎಂ ಸಿದ್ದರಾಮಯ್ಯ ಡಿಸಿ ಹಾಗೂ ಎಸ್’ಪಿ ಅವರಿಗೆ ಸೂಚನೆ ನೀಡಿದ್ದಾರೆ.
ಇನ್ನು, ಕಬ್ಬು ಬೆಳೆಗಾರರ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಲು ಸಚಿವ ತಿಮ್ಮಾಪುರ ಅವರಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post