ಕಲ್ಪ ಮೀಡಿಯಾ ಹೌಸ್ | ಬಾಗಲಕೋಟೆ |
ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ನೊಂದ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾವ ಗ್ರಾಮದಲ್ಲಿ ನಡೆದಿದೆ.
ಮೃತ ಪ್ರೇಮಿಗಳನ್ನು ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಎಂದು ಗುರುತಿಸಲಾಗಿದೆ.
Also read: ನಾಟಕ ಅಕಾಡೆಮಿ ಪ್ರಶಸ್ತಿ ನಿರಾಕರಿಸಿದ ಪ್ರಕಾಶ್ ರಾಜ್ | ಕಾರಣಕ್ಕೆ ವ್ಯಾಪಕ ಪ್ರಶಂಸೆ
ಸಚಿನ್, ಪ್ರಿಯಾ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ಸಚಿನ್ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post