ಕಲ್ಪ ಮೀಡಿಯಾ ಹೌಸ್ | ಬಾಗಲಕೋಟೆ |
ಬೀದಿನಾಯಿ #stray dog ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ಅಲೈನಾ ಲೋಕಾಪುರ (10) ಮೃತಪಟ್ಟ ದುರ್ದೈವಿ. ಡಿಸೆಂಬರ್ 27ರಂದು ಬಾಗಲಕೋಟೆ ನವನಗರದ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ ಮಾಡಿತ್ತು. ಬಾಲಕಿಯ ಕಣ್ಣು, ಮೂಗು ಮುಖದ ಮೇಲೆ ಗಂಭೀರ ಗಾಯವಾಗಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಗ್ಯದಲ್ಲಿ ಏರುಪೇರಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಅಲೈನಾ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









