ಕಲ್ಪ ಮೀಡಿಯಾ ಹೌಸ್ | ಬಾಗಲಕೋಟೆ |
ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಂಡಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ನಿಲುವು ಗಮನಿಸಿದರೆ ದೇಶದಲ್ಲಿಯೇ ಕಾಂಗ್ರೆಸ್ ಬ್ಯಾನ್ ಆಗುತ್ತೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ BYVijayendra ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರ ಪ್ರಣಾಳಿಕೆ ಮೂರ್ಖತನದ ಪರಮಾವಧಿ. ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ ಕಾಂಗ್ರೆಸ್ ಹೋಲಿಸಿದ್ದು ಸರಿಯಲ್ಲ. ಕಾಂಗ್ರೆಸ್ ಪಕ್ಷಕ್ಕೆ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ. ಕಾಂಗ್ರೆಸ್ ಮನಸಿನಲ್ಲಿರುವ ವಿಷವನ್ನ ಕಕ್ಕುತ್ತಿರೋದು ಒಳ್ಳೆಯದು. ಜನತೆಗೆ ಕಾಂಗ್ರೆಸ್ ಬುದ್ಧಿ ಮನವರಿಕೆ ಆಗ್ತಿದೆ ಎಂದು ತಿಳಿಸಿದರು.

ಜನರಿಗೆ ಪೊಳ್ಳು ಭರವಸೆ ನೀಡುತ್ತಿರುವ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶ್ರೀಲಂಕಾ, ಪಾಕಿಸ್ತಾನದ ನಂತರ ಭಾರತ ಆರ್ಥಿಕ ದಿವಾಳಿ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.

ಲಾಟರಿ ಇಲ್ಲದೇ ಬಹುಮಾನ ಘೋಷಣೆ ಮಾಡುವ ಸಂಸ್ಕೃತಿ ಬೆಳೆಸಿಕೊಂಡು ಬಂದಿರುವ ಕಾಂಗ್ರೆಸ್‌ನವರು ಪೊಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ. ಅಧಿಕಾರಕ್ಕೇ ಬರುವುದಿಲ್ಲ ಎಂದಾದ ಮೇಲೆ ಘೋಷಣೆಗೆ ಯಾವ ಬೆಲೆಯಿದೆ? ಇತ್ತ ಜೆಡಿಎಸ್‌ನವರು ಈ ಬಾರಿ ಅತಂತ್ರ ಫಲಿತಾಂಶ ಬರುತ್ತದೆ. ಹೀಗಾಗಿ, ನಾವು ಅಧಿಕಾರಕ್ಕೆ ಬರುತ್ತೇವೆಂಬ ಕನಸು ಕಾಣುತ್ತಿದ್ದಾರೆ. ಆದರೆ, ರಾಜ್ಯದ ಜನತೆ ಬಿಜೆಪಿಗೆ ಸ್ಪಷ್ಟಬಹುಮತ ನೀಡುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಕಾಂಗ್ರೆಸ್ ಪಕ್ಷಕ್ಕೆ ದಿಕ್ಕು ತೋಚದ ರೀತಿಯಲ್ಲಿ ರಾಜ್ಯದಲ್ಲಿ ವಾತಾವರಣ ಸೃಷ್ಠಿಯಾಗಿದೆ. ಹೀಗಾಗಿ, ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುವ ವಿಚಾರವನ್ನು ತೆಗೆದುಕೊಂಡಿದ್ದಾರೆ. ಈ ಸಂಘಟನೆ ದೇಶಭಕ್ತ ಸಂಘಟನೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಿಲ್ಲ, ಹಲವು ರಾಜ್ಯದಲ್ಲಿದೆ. ಇದನ್ನು ನಿಷೇಧಿಸುವ ಮಾತು ಹಾಸ್ಯಾಸ್ಪದವಾದುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post