ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಲಾಡ್ ಡೌನ್ ನಡುವೆಯೇ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ದ ಪಾದರಾಯನಪುರದ ಗಲಭೆ ಪ್ರಕರಣದ ಎಲ್ಲ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಪೀಠವು ಷರತ್ತುಬದ್ಧ ಜಾಮೀನು ನೀಡಿದ್ದು, ಆರೋಪಿಗಳು 1 ಲಕ್ಷ ರೂಪಾಯಿ ಶ್ಯೂರಿಟಿ ಬಾಂಡ್ ನೀಡಬೇಕು. ಎಲ್ಲರೂ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೊರೋನಾ ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದಲ್ಲಿ ಜಾಮೀನು ರದ್ದು ಮಾಡಲಾಗುವುದು ಎಂಬ ಷರತ್ತುಗಳನ್ನು ವಿಧಿಸಿದ್ದು, ಆರೋಪಿಗಳಿಗೆ ಕೊರೋನಾ ಪಾಸಿಟಿವ್ ಇದ್ದರೆ ಸರ್ಕಾರ ಜಾರಿಗೊಳಿಸಿರುವ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರು, ವೈದ್ಯಕೀಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 126 ಮಂದಿಯನ್ನು ಪೊಲೀಸರು ಬಂಧಿಸಿದ್ದರು.
Get in Touch With Us info@kalpa.news Whatsapp: 9481252093
















